ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು (ಜು.18) ರಂದು ರಜೆ ಘೋಷಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಪುತ್ತೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ ಹಾಗೂ ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ