ಉಪ್ಪಿನಂಗಡಿ : ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉಪ್ಪಿನಂಗಡಿ ನೇತ್ರಾವತಿ, ಕುಮಾರಧಾರ ನದಿಗಳು ಉಕ್ಕಿ ಹರಿಯುತ್ತಿದ್ದು, ಸ್ಥಳಕ್ಕೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಹಾಗೂ ಪುತ್ತೂರು ತಹಸೀಲ್ದಾರ್ ಪುರಂದರ ಹೆಗ್ಡೆ ಇಂದು ಭೇಟಿ ಪರೀಶಿಲನೆ ಮಾಡಿದರು.

ಕುಮಾರಧಾರ ಹಾಗೂ ನೇತ್ರಾವತಿ ನದಿಗಳೆರಡೂ ತುಂಬಿ ಹರಿಯುತ್ತಿದ್ದು, ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಪೊಲೀಸರು ಸಾರ್ವಜನಿಕರು ನೀರಿನ ಬಳಿ ತೆರಳದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯ್ಕ್, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.