ಮಂಗಳೂರು : ಗದ್ದೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದಲ್ಲಿ ನಡೆದಿದೆ.
ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬುವರ ಪುತ್ರಿ ಆಶ್ನಿ (21) ಮೃತ ವಿದ್ಯಾರ್ಥಿನಿ.
ಮೊದಲಿಗೆ ಮನೆಯ ಸಾಕು ನಾಯಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ನಾಯಿ ಹೊರಳಾಡುವುದನ್ನು ನೋಡಿ ರಕ್ಷಣೆಗೆ ಮುಂದಾದ ಆಶ್ನಿ, ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.