ತಣ್ಣೀರುವಂತ : ಬೈಕ್ ಗಳೆರಡು ಡಿಕ್ಕಿ ಹೊಡೆದುಕೊಂಡ ಪರಿಣಾಮ ಒಂದು ಬೈಕ್ ನ ಸವಾರ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಣ್ಣೀರುಪಂತ ಗ್ರಾಮದ ತುರ್ಕಳಿಕೆ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.
ಬಾರ್ಯ ನಿವಾಸಿ ಶಿವಾನಂದ ಅಪಘಾತದಿಂದ ಮೃತಪಟ್ಟವರು ಎನ್ನಲಾಗಿದೆ.
ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ ಆಸ್ಪತ್ರೆಗೆ ತೆರಳುವ ಸಂದರ್ಭ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆಯಿಂದ ನಾಲ್ವರು ಗಾಯಗೊಂಡಿದ್ದು ಇವರಲ್ಲಿ ಮೂರು ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ,ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದಾರೆ.
























