ಕೇಂದ್ರ ಬಜೆಟ್ ಮಂಡನೆ | ನರೇಂದ್ರ ಮೋದಿಯವರ ವಿಕಸಿತ ಭಾರತ ಕುರಿತು ಅವರಿಗಿರುವ ಬದ್ಧತೆ ಮತ್ತಷ್ಟು ಹೆಚ್ಚಿಸಿದೆ : ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಕಸಿತ ಭಾರತದ ಕುರಿತು ಅವರಿಗಿರುವ ಬದ್ಧತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಈ ಮೂಲಕ ಮೋದಿ 3.0 ನ ಸಂಕಲ್ಪ ಪತ್ರದಲ್ಲಿ ಮಾಡಲಾದ ಎಲ್ಲಾ ಭರವಸೆಗಳನ್ನು ಪೂರ್ಣಗೊಳಿಸಲು ಇಟ್ಟಿರುವ ಮೊದಲ ಹೆಜ್ಜೆಯಾಗಿದೆ ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ಅಭಿಪ್ರಾಯಪಟ್ಟಿದ್ದಾರೆ.

ದಕ್ಷಿಣ ಕನ್ನಡಕ್ಕೆ ಸಂಬಂಧಿಸಿದಂತೆ ಕೇಂದ್ರ ಬಜೆಟ್‌ನ ಒಂಬತ್ತು ಆದ್ಯತೆಗಳು ನಾನು ಹಾಕಿಕೊಂಡಿರುವ ಕಾರ್ಯಸೂಚಿ ‘ನವಯುಗ-ನವಪಥ’ಕ್ಕೆ ಪೂರಕವಾಗಲಿದೆ. ನಮ್ಮ9 ಆದ್ಯತೆಗಳ ಗುರಿಯನ್ನು ಸಮರ್ಥವಾಗಿ ಪೂರ್ಣಗೊಳಿಸಲು ಈ ಬಜೆಟ್ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕೃಷಿಯಲ್ಲಿನ ಉತ್ಪಾದಕತೆ ಮತ್ತು ಚೇತರಿಕೆ, ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ, ಅಂತರ್ಗತ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ, ಉತ್ಪಾದನೆ ಮತ್ತು ಸೇವೆಗಳು, ನಗರಾಭಿವೃದ್ಧಿ, ಇಂಧನ ಭದ್ರತೆ, 7) ಮೂಲಸೌಕರ್ಯ, ಆವಿಷ್ಕಾರ, ಸಂಶೋಧನೆ ಮತ್ತು ಅಭಿವೃದ್ಧಿ, ಮುಂದಿನ ಪೀಳಿಗೆಯ ಸುಧಾರಣೆಗಳು ಇವಿಷ್ಟು ಬಜೆಟ್‍ ನಲ್ಲಿವೆ.































 
 

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ನ ದೃಷ್ಟಿಕೋನಕ್ಕೆ ಅನುಗುಣವಾಗಿ ಅಂತರಿಕ ಬೆಳವಣಿಗೆಗೆ ಸಹಕಾರಿಯಾಗುವ ಮೂಲಕ ವಿವಿಧ ವಲಯಗಳಿಗೆ, ವಿವಿಧ ಪ್ರದೇಶಗಳಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿ ಮಾಡಲು ಈ ಬಜೆಟ್ ಸಹಕಾರಿಯಾಗಲಿದೆ.

ಪಿ ಎಂ ನರೇಂದ್ರ ಮೋದಿ ಅವರು ಹೇಳಿದಂತೆ “ಇಂದಿನ ಬಜೆಟ್ ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕೆ ದೃಢವಾದ ಅಡಿಪಾಯವನ್ನು ಹಾಕುತ್ತದೆ” ಎಂಬ ಅವರ ಮಾತು ಭವ್ಯ ಭಾರತದ ಭವಿಷ್ಯವನ್ನು ರೂಪಿಸಲಿದೆ ಎಂದು ತಿಳಿಸಿರುವ ಅವರು,

ಸ್ಪಾರ್ಟ್-ಅಪ್‌ಗಳು ಮತ್ತು ನಾವಿನ್ಯತೆ ಪರಿಸರದ ವ್ಯವಸ್ಥೆಯ ಮೇಲೆ ಗಮನ ಕೇಂದ್ರೀಕರಿಸುವುದು, ಎಂಎಸ್‍ ಎಂ ಇ ಮತ್ತು ಉತ್ಪಾದನೆಗೆ ಬೆಂಬಲ ನೀಡುವುದು – ಉತ್ಪಾದನಾ ವಲಯದಲ್ಲಿ ಹೆಚ್ಚುವರಿ ಉದ್ಯೋಗಕ್ಕೆ ಸಹಾಯ ಮಾಡುವುದು, ನಗರಗಳನ್ನು ಬೆಳವಣಿಗೆಯ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸುವ ಕಾರ್ಯಕ್ರಮ, ಮೊದಲ ಬಾರಿಗೆ ಉತ್ಪಾದನಾ ವಲಯಕ್ಕೆ ಉದ್ಯೋಗಿಗಳು ಪ್ರವೇಶ ಮಾಡಲು ಉತ್ತೇಜಿಸುವುದು ಮುಂತಾದವುಗಳ ಮೂಲಕ ಈ ಬಜೆಟ್ ಹೊಸ ದಾರಿಯನ್ನು ತೆರೆದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top