ಉತ್ತರ ಕನ್ನಡ : ಅಂಕೋಲದ ಶಿರೂರಿನಲ್ಲಿ ಹೆದ್ದಾರಿಗೆ ಗುಡ್ಡ ಕುಸಿದು ದುರಂತ ಸಂಭವಿಸಿ ಒಂದು ವಾರ ಕಳೆದಿದ್ದು ಸತತ ಕಾರ್ಯಾಚರಣೆ ವೇಳೆ ಮತ್ತೊಂದು ಶವ ಸಿಕ್ಕಿದೆ.
ನಿರಂತರ ಮಳೆಯಿಂದ ನೆಲಕ್ಕುರುಳುತ್ತಿರುವ ಗುಡ್ಡದ ಮಣ್ಣುಗಳ ನಡುವೆಯೂ ರಕ್ಷಣಾ ತಂಡ ಜೀವ ಪಣಕ್ಕಿಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದೀಗ ಮಹಿಳೆಯ ಶವ ಮಣ್ಣಿನಡಿ ಸಿಕ್ಕಿದೆ. ಘಟನೆ ನಡೆದ 8 ದಿನದ ಬಳಿಕ ಶವ ಪತ್ತೆಯಾಗಿದೆ. ಶೋಧ ಕಾರ್ಯ ಮುಂದುವರಿದಿದೆ.