ಬಂಟ್ವಾಳ : ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಸಜೀಪ ಮುನ್ನೂರು ಗ್ರಾಮ ನಂದಾವರಕೋಟೆ ನಿವಾಸಿ ಮಹಮ್ಮದ್ ರಾಫಿದ್ (19), ಬಂಟ್ವಾಳ ಮೂಡಗ್ರಾಮ ನಿವಾಸಿ ಮಹಮ್ಮದ್ ಇರ್ಷಾದ್ (23), ಮಂಚಿ ದಾವುದಲ್ ಅಮೀರ್ (26) ಬಂಧಿತರು.
ಜು.23 ರಂದು ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಮೂವರು ಯುವಕರು ಮಾದಕವಸ್ತು ಸೇವನೆ ಮಾಡಿ ನಶೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಮೂವರು ಯುವಕರು ಮಾದಕವಸ್ತು ಸೇವನೆ ಮಾಡಿರುವಂತೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಠಾಣೆಗೆ ಕರೆತಂದು ವಿಚಾರಿಸಿ, ಅವರುಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿ ನಿಷೇದಿತ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ 76/2024, ಕಲಂ : 27 (b) NDPS ಆಕ್ಟ್ -1985 ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.