ಸುಳ್ಯ : ಎರಡು ವರ್ಷದ ಹಿಂದೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯಾದ ಬಳಿಕ ಯಾವುದೇ ಗಲಭೆಗಳಲ್ಲಿ ನಾವು ಭಾಗಿಯಾಗಿರುವುದಿಲ್ಲ. ನಮ್ಮ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು13 ಮಂದಿ ಯುವಕರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ನಂದಕುಮಾರ್, ಕಮಲಾಕ್ಷ, ಅರುಣ್ ರೈ, ಪದ್ಮನಾಭ ತಡಗಜೆ, ಪ್ರಶಾಂತ್, ಆನಂದ ಯು, ಧರ್ಮಪಾಲ, ಚಿದಾನಂದ ಬಾಳಿಲ, ಹರೀಶ್ ಬಾಳಿಲ, ಡಿಪಿನ್ ಎಡಮಂಗಲ, ಶಿವಾನಂದ, ಹರ್ಷಿತ್, ನಿತೀಶ್ ಕೆ. ಎಂಬವರ ಮೇಲೆ ಕೇಸು ದಾಖಲಾಗಿರುವುದಾಗಿ, ನಾವು ಯಾರು ಈ ಘಟನೆಗಳಲ್ಲಿ ಭಾಗಿಯಾಗಿರುವುದಿಲ್ಲವೆಂದು ಹಿಂದೂ ಮುಖಂಡ ಶಿವ ಪೂಜಾರಿ ಅವರ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೈವಸ್ಥಾನದ ಅರ್ಚಕ ತಿಮ್ಮಪ್ಪ ನಾವೂರು ಉಪಸ್ಥಿತರಿದ್ದರು.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಬಳಿಕ ನಡೆದ ಗಲಭೆಯಲ್ಲಿ ಭಾಗಿಯಾಗಿಲ್ಲವೆಂದು ಯುವಕರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ
