ಉತ್ತರಕನ್ನಡ : ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಪತ್ತೆಯಾಗಿದೆ.
ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.
ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲಿಟರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ.