ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ಗುರು ಪೂರ್ಣಿಮೆ ಹಾಗೂ ಗುರುವಂದನಾ ಕಾರ್ಯಕ್ರಮ ಇಂದು ನಡೆಯಿತು.
ಮುಖ್ಯ ಅತಿಥಿಯಾಗಿ ಸಂದರ್ಶಕ ಉಪನ್ಯಾಸಕ ಪೂರ್ಣಾತ್ಮರಾಮ ಪಾಲ್ಗೊಂಡು ಗುರು ಪೂರ್ಣಿಮೆಯ ಮಹತ್ವ ಹಾಗೂ ವೇದವ್ಯಾಸರ ಪರಿಪೂರ್ಣ ವ್ಯಕ್ತಿತ್ವದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲೆ ಜಯಲಕ್ಷ್ಮಿ ಕೆ ಅವರನ್ನು ಶಾಲಾ ಸಂಚಾಲಕ ಎ.ವಿ. ನಾರಾಯಣ ಹಾಗೂ ಪ್ರತಿಭಾ ದೇವಿ ದಂಪತಿ ಗೌರವಿಸಿ ಗುರುವಂದನೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು.
ಜಯಲಕ್ಷ್ಮಿ ಗುರು ಹಾಗೂ ಶಿಷ್ಯರ ಸಂಬಂಧದ ಬಗ್ಗೆ ಶಿಕ್ಷಣ ಸಂಸ್ಥೆಯ ಪ್ರಾಮುಖ್ಯತೆ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕ ಎ. ವಿ. ನಾರಾಯಣ ವಹಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ, ಉಪಾಧ್ಯಕ್ಷ ಉಮೇಶ್ ಮಳುವೇಲು ಉಪಸ್ಥಿತರಿದ್ದರು.
ಎವಿಜಿ ಶಾಲೆಯ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಂಸ್ಥೆಯ ಗುರುವೃಂದದವರಿಗೆ ಪ್ರಣಾಮ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು. ಸಂಸ್ಥೆಯ ನಿರ್ದೇಶಕರಾದ ಪುಷ್ಪಾವತಿ ಕಳುವಾಜೆ, ಗಂಗಾಧರ ಗೌಡ, ಪ್ರತಿಭಾ ದೇವಿ, ವಾಮನ ಗೌಡ ಹಾಗೂ ಸಂಸ್ಥೆಯ ಹಿತೈಷಿ ನಿವೃತ್ತ ಉಪನ್ಯಾಸಕರಾದ ಶ್ರೀಮತಿ ವಾರಿಜ ಕಾಣಿಚ್ಚಾರು ಶಿಕ್ಷಕವೃಂದ ಬೋಧಕೇತರ ವೃಂದ ಪೋಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಶಿಕ್ಷಕಿಯರಾದ ಹರ್ಷಿತ ಪ್ರಾರ್ಥಿಸಿ, ರಾಧಾ ಸ್ವಾಗತಿಸಿದರು. ರಂಜಿತಾ ರೈ ಸಂವಿಧಾನದ ಪೂರ್ವ ಪೀಠಿಕೆಯನ್ನು ವಾಚಿಸಿದರು. ಉಮೇಶ್ ಮಳುವೇಲು ವಂದಿಸಿದರು. ಯಶುಭ ರೈ ಕಾರ್ಯಕ್ರಮ ನಿರೂಪಿಸಿದರು.