ನಾಳೆ (ಜು.26) : ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಕಾರ್ಗಿಲ್ ವಿಜಯೋತ್ಸವ ‘ಯೋಧ ನಮನ’ ಕಾರ್ಯಕ್ರಮ

ಪುತ್ತೂರು: ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಕಾರ್ಗಿಲ್ ವಿಜಯೋತ್ಸವ ‘ಯೋಧ ನಮನ’ ಕಾರ್ಯಕ್ರಮ ಜು.26 ಶುಕ್ರವಾರ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವ ಶ್ರೀ ಸಭಾಂಗಣದಲ್ಲಿ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಅಂಗವಾಗಿ ದೇಶ ರಕ್ಷಣೆಯಲ್ಲಿ ನಿರತರಾಗಿರುವ ವೀರಯೋಧರಿಗೆ ಮತ್ತು ನಿವೃತ್ತ ಯೋಧರಿಗೆ ಸನ್ಮಾನ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಪುಣಚ ದೇವಿನಗರ ಶ್ರೀ ದೇವಿ ವಿದ್ಯಾ ಕೇಂದ್ರದ ಅಧ್ಯಕ್ಷ ಜಯಶ್ಯಾಮ ನೀರ್ಕಜೆ ವಹಿಸಲಿದ್ದು, SM, VSM Retd, Former Comptroller to Bharat Ratna Dr.APJ Abdul Kalam Former Advisor to minister of State Defensce ಅಶೋಕ್ ಕಿಣಿ ಎಚ್‍. ಪ್ರಧಾನ ಭಾಷಣ ಮಾಡಲಿದ್ದಾರೆ.

 ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 11.30 ರಿಂದ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ದೇಶಭಕ್ತಿ ಗಾನಸುಧೆ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top