ಬೆಂಗಳೂರು : ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪನವರು ಹಾಗೂ ವಿರೋಧ ಪಕ್ಷ ನಾಯಕರಾದ ಶ್ರೀ ಆರ್ ಅಶೋಕ್ ಅವರುಗಳ ನೇತೃತ್ವದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ, ಎಸ್.ಸಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿದ್ದ ಹಣ ಅನ್ಯ ಕಾರ್ಯಗಳಿಗೆ ಬಳಸಿ ಪರಿಶಿಷ್ಟ ಜಾತಿ ಪಂಗಡಗಳ ಸಮುದಾಯಗಳಿಗೆ ದ್ರೋಹ ಬಗೆದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ, ವಿಧಾನಸೌಧದಲ್ಲಿ ಉಭಯ ಸದನಗಳ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರೊಂದಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭವಾಯಿತು.
ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಹಾಗೂ ಬಡವರಿಗೆ ನ್ಯಾಯ ಸಿಗುವವರೆಗೂ ಬಿಜೆಪಿ ಹೋರಾಟ ಮುಂದುವರಿಯಲಿದೆ.
ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣ ಸ್ವಾಮಿ, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ.ಟಿ ರವಿ ಅವರು ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ವಿಧಾನಸಭಾ ಹಾಗೂ ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದಾರೆ.