ಜು.28 : ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕಂಡಡೊಂಜಿ ದಿನ ಕಾರ್ಯಕ್ರಮ, ನೃತ್ಯ ಗಾನ ವೈಭವ

ಪುತ್ತೂರು: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ ಒಕ್ಕಲಿಗ ಗೌಡ ಸೇವಾ ಮಹಿಳಾ ಸಂಘ ಮತ್ತು ಈಶ್ವರಮಂಗಲ ವಲಯ ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ವಲಯದ ಸಹಕಾರದೊಂದಿಗೆ ‘ಕಂಡಡೊಂಜಿ ದಿನ’ ಕಾರ್ಯಕ್ರಮ ಜು.28 ಭಾನುವಾರ ಈಶ್ವರಮಂಗಲ ಮರಕ್ಕಡ ಗದ್ದೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಈಶ್ವರಮಂಗಲ ಮರಕ್ಕಡ ಗದ್ದೆಯ ಮಾಲಕ ಗಿರೀಶ್ ರೈ ದೀಪ ಪ್ರಜ್ವಲಿಸಿ ಉದ್ಘಾಟಿಸಲಿದ್ದು, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಪೂರ್ವಾಧ್ಯಕ್ಷ ನಾಗಪ್ಪ ಗೌಡ ಬೊಮ್ಮೇಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನೆಟ್ಟಣಿಗೆಮುಡ್ನೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ದಿವಾಕರ ಗೌಡ ಮಡ್ಯಲಮಜಲು, ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಕಲಾವತಿ ಎಸ್. ಗೌಡ, ಒಕ್ಕಲಿಗ ಗೌಡ ಮಹಿಳಾ ಘಟಕದ ಅಧ್ಯಕ್ಷೆ ದೇವಿ ಪ್ರಶಾಂತಿ, ಶೇಶಪ್ಪ ಗೌಡ ಮೆಣಸಿನಕಾನ, ಹೊನ್ನಪ್ಪ ಗೌಡ ಕೊಂಬೋಟ್ಟು, ಜತ್ತಪ್ಪ ಗೌಡ ಕೊಂಕಣಿಗುಂಡಿ, ನರೇಂದ್ರ ಗೌಡ ಹೊಸಮನೆ ಆಜಡ್ಕ, ಮೋಹನಾಂಗಿ ಬೀಜಂತಡ್ಕ, ವಿಜಯ ಕುಮಾರ್ ಕೆಮ್ಮತಡ್ಕ, ಭಾಸ್ಕರ ಗೌಡ ದೊಡ್ಡಮನೆ, ಅರುಣ್ ಕುಮಾರ್ ಕನ್ನಡ್ಕ, ಶ್ರೀಧರ ಗೌಡ ಕನ್ನಯ, ಸುಂದರ ಗೌಡ ಸಾರಕೂಟೇಲು, ಬಾಲಕೃಷ್ಣ ಗೌಡ ಪಟ್ಲಡ್ಕ ಭಾಗವಹಿಸಲಿದ್ದಾರೆ.

ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಜಗ್ಗನಾಥ ಗೌಡ ಪಟ್ಟೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು, ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಒಕ್ಕಲಿಗ ಗೌಡ ಸೇವಾ ಸಂಘದ ತಾಲೂಕು ಅಧ್ಯಕ್ಷ ರವಿ ಮುಂಗ್ಲಿಮನೆ, ಒಕ್ಕಲಿಗ ಗೌಡ ಯುವ ಘಟಕದ ತಾಲೂಕು ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ, ಮಹಿಳಾ ಘಟಕದ ತಾಲೂಕು  ಅಧ್ಯಕ್ಷೆ ವಾರಿಜಾ ಕೆ ಗೌಡ, ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾಜಿ ಅದ್ಯಕ್ಷ ಶಿವರಾಮ ಗೌಡ ಹೆಚ್ ಡಿ, ಈಶ್ವರಮಂಗಲ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ವಲಯ ಉಸ್ತುವಾರಿ ಲೋಕೇಶ್ ಚಾಕೋಟೆ,, ಕುಂಬ್ರ ವಲಯ ಉಸ್ತುವಾರಿ ಸತೀಶ್ ಪಾಂಬಾರು, ನೆಟ್ಟಣಿಗೆ ಮುಡ್ನೂರು ಗ್ರಾಮ ಸಮಿತಿ ಉಪಾಧ್ಯಕ್ಷ ನವೀನ್ ಕುಕ್ಕುಡೇಲು, ಪ್ರಗತಿಪರ ಕೃಷಿಕ ವಿಶ್ವನಾಥ ಗೌಡ ಆಡೀಲು, ನಿಡ್ಪಳ್ಳಿ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷರಾದ ನಾಗೇಶ್ ಗೌಡ ಪುಳಿತ್ತಡಿ, ಜಯರಾಮ ಗೌಡ ಶೇಖ ಭಾಗವಹಿಸಲಿದ್ದಾರೆ.



































 
 

ಕೆಸರುಗದ್ದೆ ಕ್ರೀಡಾಕೂಟದ ಅಂಗವಾಗಿ ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಕ್ರೀಡಾಕೂಟ ನಡೆಯಲಿದೆ. ಸಂಜೆ ಸಮರ್ಥ ಸಾಂಸ್ಕೃತಿಕ ಕಲಾ ತಂಡದಿಂದ ಗೌಡ ಸಮಾಜದಲ್ಲಿ ಜಾನಪದ ಸೊಗಡು ಎಂಬ ವಿಷಯಾಧಾರೀತ ನೃತ್ಯ ಗಾನ ವೈಭವ ತೇಜಸ್ವಿನಿ ನವೀನ್ ಗೌಡ ಕುಕ್ಕುಡೇಲು ಸಂಯೋಜನೆಯಲ್ಲಿ ನಡೆಯಲಿದೆ. ಸಮಾಜಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೋಳಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top