ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಅರ್ಜುನ್ ಮತ್ತು ಲಾರಿ ನದಿಯ ಸುಮಾರು 20 ಅಡಿ ಆಳದಲ್ಲಿ ಸಿಲುಕಿರುವ ಮಾಹಿತಿ ದೊರೆತ ಬೆನ್ನಲ್ಲೇ ಕರಾವಳಿಯ ಮುಗುಳು ತಜ್ಞ ಈಶ್ವರ್ ಮಲ್ಪೆ ಮತ್ತು ಅವರ ತಂಡ ಶಿರೂರಿಗೆ ಇಂದು ಆಗಮಿಸುತ್ತಿದೆ ಎಂದು ತಿಳಿದು ಬಂದಿದೆ.
ಶಿರೂರು ಗುಡ್ಡ ಕುಸಿತ ಪ್ರಕರಣ ನಡೆದು12 ದಿನವಾಗಿದ್ದು, ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ದುರಂತದಲ್ಲಿ ಸಿಲುಕಿ ನಾಪತ್ತೆಯಾಗಿದ್ದಾರೆ. ಸದ್ಯ ಎಲ್ಲಾ ರೀತಿಯಲ್ಲೂ ಹುಡುಕಾಟ ನಡೆದಿದೆ. ಆದರೂ ಪತ್ತೆಯಾಗಿಲ್ಲ. ಮುಳುಗು ತಜ್ಞರಿಂದ ನೀರಿನಲ್ಲಿರುವ ಲಾರಿ ಮತ್ತು ಚಾಲಕ ಅರ್ಜುನ್‌ನನ್ನು ಪತ್ತೆ ಹಚ್ಚಬೇಕಿದ್ದು, ಈ ನಿಟ್ಟಿನಲ್ಲಿ ಕರಾವಳಿಯ ನುರಿತ ಮುಳುಗು ತಜ್ಞ ಈಶ್ವರ್ ಮಲ್ಪೆಯವರ ತಂಡ ಜಿಲ್ಲಾಡಳಿತದ ಮನವಿ ಮೇರೆಗೆ ಸ್ಥಳಕ್ಕಾಗಮಿಸುತ್ತಿದ್ದಾರೆ.
ಈಶ್ವರ್ ಮಲ್ಪೆ ಮೂಲತಃ ಕರಾವಳಿ ಭಾಗದವರು. ಆ್ಯಂಬುಲೆನ್ಸ್ ಚಾಲಕನಾಗಿರುವ ಈಶ್ವರ್ ಅದೇಷ್ಟೋ ಜನರ ಜೀವ ಉಳಿಸಿದ್ದಾರೆ. ಮಾತ್ರವಲ್ಲದೆ ನದಿ ಆಳದಲ್ಲಿ ಸಿಲುಕಿದ, ನಾಪತ್ತೆಯಾದ ಮೃತದೇಹವನ್ನು ಪತ್ತೆ ಹಚ್ಚುವ ಸಾಹಸಿ. ಯಾರಿಂದಲೂ ಸಾಧ್ಯವಾಗದ ಕೆಲಸವನ್ನು ಈಶ್ವರ್ ಮಲ್ಪೆ ಮಾಡುತ್ತಾರೆ. ಎಂತಹದೇ ಅಪಾಯಕಾರಿಯಾದರು ಆ ಸ್ಥಳದಲ್ಲಿ ಶೋಧ ನಡೆಸಿ, ಅದೆಷ್ಟೋ ಮೃತದೇಹವನ್ನು ಮೇಲೆತ್ತಿದ್ದಾರೆ.