ಹೆಚ್‍.ಡಿ.ಕುಮಾರಸ್ವಾಮಿ ಮೂಗಿನಿಂದ ರಕ್ತ ಸ್ರಾವ | ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್‍ ನಿಂದ ವಾಲ್ಮೀಕಿ, ಮುಡಾ ಹಗರಣ ಖಂಡಿಸಿದ ಪಾದಯಾತ್ರೆಗೆ ತೀರ್ಮಾನ ಮಾಡಲಾಗಿದ್ದು, ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಸಂದರ್ಭ ಕೇಂದ್ರ ಸಚಿವ ಹೆಚ್‍.ಡಿ.ಕುಮಾರಸ್ವಾಮಿ ಮೂಗಿನಿಂದ ರಕ್ತ ಕಾಣಿಸಿಕೊಂಡಿದೆ.

ವಾಲ್ಮೀಕಿ, ಮುಡಾ ಹಗರಣದ ವಿವಾರವಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತಾಡುತ್ತಿದ್ದರು. ಈ ವೇಳೆ ಏಕಾಏಕಿ ಮೂಗಿನಿಂದ ರಕ್ತ ಬಂದಿದೆ. ಆ

ಕೂಡಲೇ ಹೆಚ್.ಡಿ.ಕುಮಾರಸ್ವಾಮಿ ಅವರು ಕರ್ಚಿಫ್ ನಿಂದ ಒರೆಸಿಕೊಂಡಿದ್ದಾರೆ. ತಕ್ಷಣ ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ.































 
 

ರಕ್ತಸ್ರಾವ ಹೆಚ್ಚಾದಂತೆ ಖಾಸಗಿ ಹೋಟೆಲ್ ನಿಂದ ಕುಮಾರಸ್ವಾಮಿ ಅವರನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಅವರನ್ನು ಕಳುಹಿಸಿಕೊಡಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top