ಪುತ್ತೂರು: ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪೆನಿ ಬನ್ನೂರಿನಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕರಾದ ಎ.ವಿ. ನಾರಾಯಣ ಅವರಿಗೆ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜು.26 ರಂದು ಮಂಗಳೂರಿನ ರೀಜನಲ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌವಿಸಲಾಯಿತು. ಈ ಸಂದರ್ಭದಲ್ಲಿ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪೆನಿ ಮ್ಯಾನೇಜರ್ ಪೂಜಿತ್, ಜಗದೀಶ್ ಬೆಳ್ಳಾರೆ, ತಾರನಾಥ ಪುತ್ತೂರು ಉಪಸ್ಥಿತರಿದ್ದರು.