ಗುಡ್ಡ ಕುಸಿದ : ಅಜಿಲಮೊಗರು- ಸರಳಿಕಟ್ಟೆ – ಉಪ್ಪಿನಂಗಡಿ ಸಂಚಾರ ಬಂದ್

ಉಪ್ಪಿನಂಗಡಿ :  ಭಾರೀ ಗುಡ್ಡ ಕುಸಿದ ಪರಿಣಾಮ ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಅಜಿಲಮೊಗರು ಕಡಿತಗೊಂಡಿದೆ. ಸರಳಿಕಟ್ಟೆ – ಉಪ್ಪಿನಂಗಡಿ ಸಂಪರ್ಕ

ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ.

ಪಂಜುಕ್ಕು ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್‌ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ. ಗುಡ್ಡ ಕುಸಿತದಿಂದ ವಿದ್ಯುತ್ ಕಂಬಗಳು ಧರೆಗುರುಳಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.



































 
 

ಉಪ್ಪಿನಂಗಡಿ, ಪುತ್ತೂರು, ಬಿ.ಸಿರೋಡು ತೆರಳುವ ಪ್ರಯಾಣಿಕರು ಬದಲಿ ರಸ್ತೆ ಬಳಸುವಂತೆ ಸೂಚಿಸಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top