ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ,ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ದ.ಕ., ಕಾಸರಗೋಡು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇನ್ನು ಸಮುದ್ರ ತೀರ ಪ್ರದೇಶಗಳಿಗೆ, ತುಂಬಿ ಹರಿಯುತ್ತಿರುವ ನದಿ ಸಮೀಪ ಸಾರ್ವಜನಿಕರು ತೆರಳದಂತೆ, ಮೀನುಗಾರಿಕೆಗೆ ತೆರಳದಂತೆ ಆದೇಶ ನೀಡಲಾಗಿದೆ.