ಗಯಾಪದ ಕ್ಷೇತ್ರ ಉಪ್ಪಿನಂಗಡಿಯಲ್ಲಿ ಸಂಗಮಕ್ಕೆ ಕ್ಷಣಗಣನೆ | ಗಂಗಾಪೂಜೆ ನಡೆದು ಬಾಗೀನ ಅರ್ಪಣೆ

ಉಪ್ಪಿನಂಗಡಿ: ಸಂಗಮ ಕ್ಷೇತ್ರ ಉಪ್ಪಿನಂಗಡಿಯಲ್ಲಿ ಸಂಗಮಕ್ಕಾಗಿ ಕ್ಷಣಗಣನೆ ಆರಂಭಗೊಂಡಿದ್ದು, ಈ ಹಿನ್ನಲೆಯಲ್ಲಿ  ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಗಂಗಾಪೂಜೆ ನಡೆದು ಬಾಗೀನ ಅರ್ಪಿಸಲಾಯಿತು.

ಶಾಸಕ ಅಶೋಕ್ ಕುಮಾರ್ ರೈ ಗಂಗಾಪೂಜೆಯಲ್ಲಿ ಪಾಲ್ಗೊಂಡು ಬಾಗೀನ ಅರ್ಪಿಸಿದರು. ನೂರಾರು ಭಕ್ತಾದಿಗಳ ಜಯಘೋಷದೊಂದಿಗೆ ಬಾಗೀನ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯ್ಕ್‍, ಸಮಿತಿ ಸದಸ್ಯರು, ಅರ್ಚಕರು, ನೂರಾರು ಭಕ್ತಾದಿಗಳು ಸಂಗಮ ಕ್ಷಣಕ್ಕಾಗಿ ಕಾಯುತ್ತಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top