ಮಂಗಳೂರು : ಚಲಿಸುತ್ತಿದ್ದ ಬಸ್ನಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತವಾಗಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬಸ್ ಚಾಲಕ ಹಾಗೂ ನಿರ್ವಾಹಕ ಸಮಯ ಪ್ರಜ್ಞೆ ಮೆರೆದು ಜೀವ ರಕ್ಷಿಸಿದರು.
ಮಂಗಳೂರಿನ ಕೂಳೂರು ಮಾರ್ಗ 13ಎಫ್ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ್ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿನಿಯೊಬ್ಬರಲ್ಲಿ ಹಠಾತ್ ಹೃದಯಾಘಾತದ ಲಕ್ಷಣಗಳು ಕಾಣಿಸಿವೆ.
ತಕ್ಷಣವೇ ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ಕಂಡಕ್ಟರ್ ಮಹೇಶ್ ಪೂಜಾರಿ ಬಸ್ ಅನ್ನು ತುರ್ತು ವಾಹನವನ್ನಾಗಿ ಪರಿವರ್ತಿಸಿದರು. ಬಸ್ನಲ್ಲಿದ್ದ ಎಮರ್ಜೆನ್ಸಿ ಸೈರನ್ ಚಾಲೂ ಮಾಡಿದ ಅವರು ಕೇವಲ 6 ನಿಮಿಷಗಳಲ್ಲಿ 6 ಕಿಲೋಮೀಟರ್ ದೂರ ಕ್ರಮಿಸಿ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ತಲುಪಿದರು.