ಪುತ್ತೂರು: ಕಡಬ ಸರಸ್ವತಿ ವಿದ್ಯಾಕೇಂದ್ರದಲ್ಲಿ ವಿದ್ಯಾಭಾರತಿ ಕರ್ನಾಟಕದ ವತಿಯಿಂದ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನರೇಂದ್ರ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಗಳಿಸಿದ್ದಾರೆ.
ಪ್ರಥಮ ವಾಣಿಜ್ಯ ವಿಭಾಗದ ಸಾತ್ವಿಕ್ ಎಸ್. ದ್ವಿತೀಯ, ಲಿಖಿತ್ ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.