ನೆಲ್ಯಾಡಿ : ಆ.1 ರಂದು ಮಧ್ಯಾಹ್ನದ ವೇಳೆ ಶಿರಾಡಿ ಘಾಟ್ ನಲ್ಲಿ ವಾಹನಗಳ ಸಂಚಾರ ಪುನರಾರಂಭಗೊಂಡಿದೆ.
ಕಳೆದ ರಾತ್ರಿ ಶಿರಾಡಿ ಘಾಟ್ ನ ದೊಡ್ಡ ತಪ್ಲು ಬಳಿ ಗುಡ್ಡ ಜರಿದು ವಾಹನಗಳ ಮೇಲೆ ಮಣ್ಣು ಬಿದ್ದ ಪರಿಣಾಮ ಶಿರಾಡಿ ಘಾಟ್ ನಲ್ಲಿ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು.
ರಸ್ತೆಗೆ ಬಿದ್ದ ಮಣ್ಣು ತೆರವುಗೊಳಿಸಲಾಗಿದೆ. ಕೆಸರು ಮಣ್ಣಿನಲ್ಲಿ ಸಿಲುಕಿಕೊಂಡಿದ್ದ 2 ಕಂಟೈನರ್ ಹಾಗೂ 1 ಡಾಮರು ಸಾಗಾಟದ ಟ್ಯಾಂಕರ್ ತೆರವುಗೊಳಿಸಲಾಗಿದ್ದು ಮಧ್ಯಾಹ್ನದ ಬಳಿಕ ಸಂಚಾರ ಪುನರಾರಂಭಗೊಂಡಿದೆ. ಆದರೂ ಮಣ್ಣು ಕುಸಿಯುತ್ತಲೇ ಇದ್ದು ವಾಹನ ಸವಾರರು ಎಚ್ಚರಿಕೆಯಿಂದ ಸಂಚಾರ ಮಾಡಬೇಕಾಗಿದೆ.