ಬೆಂಗಳೂರು : ಬೆಳ್ಳಾರೆಯ ನೆಟ್ಟಾರಿನ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್ ಐಎ ಇಬ್ಬರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.
ಪ್ರಕರಣ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್ವೈ ರಿಯಾಜ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಸಕಲೇಶಪುರದಲ್ಲಿ ಮುಸ್ತಫಾ ಪೈಚಾರ್ಗೆ ಮನ್ಸೂರ್, ರಿಯಾಜ್ ಆಶ್ರಯ ನೀಡಿದ್ದರು. ಮೇ 5ರಂದು ಸಕಲೇಶಪುರದಲ್ಲಿ ಮುಸ್ತಫಾ ನನ್ನು ಬಂಧಿಸಿದ್ದು, ವಿದೇಶಕ್ಕೆ ಪರಾರಿಯಾಗಲು ಯತ್ನಿಸಿದ್ದ ರಿಯಾಜ್ ನನ್ನು ಜೂ.3ರಂದು ಮುಂಬೈ ಏರ್ ಪೋರ್ಟ್ನಲ್ಲಿ ಬಂಧಿಸಲಾಗಿತ್ತು. ಪ್ರವೀಣ್ ನೆಟ್ಟಾರು ಕೊಲೆ ಕೇಸ್ನಲ್ಲಿ ಇದುವರೆಗೆ ಎನ್ಐಎ 21 ಆರೋಪಿಗಳನ್ನು ಅರೆಸ್ಟ್ ಮಾಡಿ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.