ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಸಿದ್ಧಾಪುರ ಸರಸ್ವತಿ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ತರುಣರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಕಾಲೇಜಿನ ವಾಣಿಜ್ಯ ವಿಭಾಗದ ಸಾತ್ವಿಕ್ ಮತ್ತು ಲಿಖಿತ್ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಆಂಧ್ರಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆ ಆಗಿದ್ದಾರೆ.
ಅವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದೆ.