ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪುಂಡರು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿ ವಿಕೃತಿ ಮೆರೆದಿದ್ದಾರೆ.
ಸೋಮವಾರ ನಡೆದ ಹಿಂಸಾಚಾರದಲ್ಲಿ 4 ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಹಿಂದೂ, ಬೌದ್ಧ, ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ಮಾತನಾಡಿ, ದೇಶಾದ್ಯಂತ ಕನಿಷ್ಠ 4 ಹಿಂದೂ ದೇವಾಲಯಗಳಿಗೆ ಹಾನಿಯಾಗಿದೆ ಎಂಬ ವರದಿಗಳು ಬಂದಿವೆ.
ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೆಲವು ಹಿಂದೂ ಸಮಾಜದ ಮುಖಂಡರು ಭಯಭೀತರಾಗಿದ್ದಾರೆ ಎಂದು ಹೇಳಿದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಢಾಕಾದ ಧನ್ಮಂಡಿ ಪ್ರದೇಶದಲ್ಲಿರುವ ಇಂದಿರಾಗಾಂಧಿ ಸಾಂಸ್ಕೃತಿಕ ಕೇಂದ್ರವನ್ನು ಪುಂಡರು ಧ್ವಂಸ ಮಾಡಿದ್ದಾರೆ.