ಪುತ್ತೂರು: ಪಿಕಪ್ ಮತ್ತು ಸ್ಕೂಟಿ ಡಿಕ್ಕಿ ಹೊಡೆದುಕೊಂಡ ಘಟನೆ ಇದೀಗ ನೆಹರೂನಗರದ ಮಾಸ್ಟರ್ ಪ್ಲಾನರಿ ಬಳಿ ನಡೆದಿದೆ.
ಪಿಕಪ್ ಚಾಲಕ ಟರ್ನ್ ಮಾಡುವ ಸಂದರ್ಭ ಸ್ಕೂಟಿ ಸವಾರ ಬಂದು ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಸ್ಕೂಟಿ ಸವಾರನಿಗೆ ಗಾಯವಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.
ಇದೇಸ್ಥಳದಲ್ಲಿ ಹಲವಾರು ಆಕ್ಸಿಡೆಂಟ್ ಗಳು ಈ ಹಿಂದೆ ನಡೆದಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಾ ಬಂದಿದ್ದಾರೆ. ಆದರೆ ಇದುವರೆಗೆ ಸಂಬಂಧ ಪಟ್ಟ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.