ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ಫ್ಯಾಶನ್ ಡಿಸೈನ್ ವಿಭಾಗ, “ಫಸೆರಾ” ಫ್ಯಾಶನ್ ಡಿಸೈನ್ ಅಸೋಸಿಯೇಶನ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಹೊಸದಾಗಿ ಪ್ರವೇಶ ಪಡೆದಿರುವ ಪ್ರಥಮ ಫ್ಯಾಶನ್ ಡಿಸೈನ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಗಾರ ಸೋಮವಾರ ನಡೆಯಿತು.

ತರಬೇತುದಾರರಾಗಿ ಕೌಶಲ್ಯ ತರಬೇತುದಾರ, ಕಾಲೇಜಿನ ಫ್ಯಾಶನ್ ವಿಭಾಗದ ವಿಭಾಗ ಮುಖ್ಯಸ್ಥ ಕಿಶನ್ ಎನ್. ರಾವ್ ವಿದ್ಯಾರ್ಥಿಗಳಿಗೆ ಗೋಲ್ ಸೆಟ್ಟಿಂಗ್ ವಿಷಯದಲ್ಲಿ ಮಾಹಿತಿ ಕಾರ್ಯಗಾರ ನಡೆಸಿಕೊಟ್ಟು, ಶಿಕ್ಷಣದ ಜೊತೆಯಲ್ಲಿ ಕೌಶಲ್ಯ ಅಭಿವೃದ್ಧಿ ಕೂಡ ವಿದ್ಯಾರ್ಥಿಗಳನ್ನು ನಿರ್ಧರಿತ ಗುರಿ ತಲುಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಉನ್ನತವಾದ ಗುರಿ ಇರಬೇಕು ಎಂದು ಹೇಳಿದರು.
ಅಸೋಸಿಯೇಷನ್ ಸಂಯೋಜಕಿ ಜನಿತ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿಭಾಗದ ಅಧ್ಯಾಪಕರು ಮತ್ತು ಪ್ರಥಮ ಫ್ಯಾಶನ್ ಡಿಸೈನ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.