ಬಾಂಗ್ಲಾದಲ್ಲಿರುವ ಹಿಂದೂಗಳ ರಕ್ಷಣೆ ಮಾಡದಿದ್ದರೆ ಭಾರತ ಬಲಿಷ್ಠ ರಾಷ್ಟ್ರವಾಗಲು ಸಾಧ್ಯವಿಲ್ಲ | ಸದ್ಗುರು

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ, ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿಯೆತ್ತಿರುವ ಸದ್ಗುರು ಜಗ್ಗಿ ವಾಸುದೇವ್‌, ಹಿಂದೂಗಳ ಮೇಲಿನ ದೌರ್ಜನ್ಯಗಳು ಕೇವಲ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ ಎಂದಿದ್ದಾರೆ.

ಬಾಂಗ್ಲಾದಲ್ಲಿ ವಾಸಿಸುವ ಅಲ್ಪಸಂಖ್ಯಾತರನ್ನು ರಕ್ಷಿಸಲು ವಿಫಲವಾದರೆ ಇಂಡಿಯಾ ಅಥವಾ ಭಾರತವು ಬಲಿಷ್ಠ ರಾಷ್ಟ್ರವಾಗಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಇಶಾ ಫೌಂಡೇಶನ್‌ನ ಸಂಸ್ಥಾಪಕ, ಆಧ್ಯಾತ್ಮಿಕ ಗುರುಗಳಾದ ಸದ್ಗುರು ಒತ್ತಾಯಿಸಿದ್ದಾರೆ.































 
 

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ‘ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಕೇವಲ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ. ನಮ್ಮ ನೆರೆಹೊರೆಯಲ್ಲಿರುವ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಾತ್ರಿಪಡಿಸಲು ನಾವು ಆದಷ್ಟು ಬೇಗ ಎದ್ದುನಿಂತು ಕಾರ್ಯನಿರ್ವಹಿಸದಿದ್ದರೆ ಭಾರತವು ಮಹಾ-ಭಾರತವಾಗುವುದಿಲ್ಲ. ದುರದೃಷ್ಟವಶಾತ್‌ ಬಾಂಗ್ಲಾ ನಮ್ಮ ನೆರೆಯ ರಾಷ್ಟ್ರವಾಗಿದೆ. ನಮ್ಮ ನೆಲದ ನಾಗರಿಕರನ್ನು ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಬಾಂಗ್ಲಾದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಪ್ರಧಾನಿ ಶೇಖ್‌ ಹಸೀನಾ ಅವರು ರಾಜೀನಾಮೆ ನೀಡುವಂತೆ ಮಾಡಿತು.ಹಿಂದೂಗಳು ಹಿಂಸಾಚಾರಕ್ಕೆ ಒಳಗಾದರು. ಬಾಂಗ್ಲಾದೇಶದ 27 ಜಿಲ್ಲೆಗಳಲ್ಲಿ ಹಿಂದೂ ಮನೆಗಳು ಮತ್ತು ವ್ಯಾಪಾರ ಮಳಿಗೆಗಳ ಮೇಲೆ ದಾಳಿ ನಡೆಸಲಾಗಿದೆ. ಈ ರೀತಿಯ ದುಷ್ಕೃತ್ಯಗಳಿಂದ ನಿಜವಾಗಿ ಭಾರತೀಯ ನಾಗರಿಕತೆಗೆ ಸೇರಿದವರನ್ನು ರಕ್ಷಿಸುವುದು ಭಾರತದ ಜವಾಬ್ದಾರಿಯಾಗಿದೆ ಎಂದು ಸದ್ಗುರು ಹೇಳಿದ್ದಾರೆ.

ಪ್ರಧಾನಿ ರಾಜೀನಾಮೆ ಬಳಿಕವೂ ಮೀಸಲಾತಿ ಹೋರಾಟ ಆಂದೋಲನ ನಡೆಸುತ್ತಿರುವವರು ಹಿಂದೂ ದೇವಾಲಯಗಳು ಮತ್ತು ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಈ ಕುರಿತು ಸದ್ಗುರು ಪ್ರತಿಕ್ರಿಯಿಸಿದ್ದಾರೆ. ಪಾಕಿಸ್ತಾನದ ಮೇಲೆ ಯುದ್ಧ ಮಾಡಿ ಬಾಂಗ್ಲಾದೇಶವನ್ನು ಬಿಡಿಸಿಕೊಟ್ಟ ಕಾಂಗ್ರೆಸ್ಸಿಗೆ ಹೋಗಿಯಬೇಕು ನಮ್ಮ ದೇಶದ ಸೈನಿಕರನ್ನು ಸುಮಾರು ಜನ ಪ್ರಾಣತ್ತಿದ್ದಾರೆ ಯುದ್ಧ ಮಾಡಿ ಬಾಂಗ್ಲಾದೇಶದ ನಾಗರಿಕರಿಗೆ ಅರ್ಥವಾಗುವುದಿಲ್ಲವೇ ಇಂದಿರಾ ಗಾಂಧಿ ಕಾಲದಲ್ಲಿ ನಡೆದಿದೆ ಆ ದಿನವೇ ಭಾರತಕ್ಕೆ ಸೇರಿಸಿಕೊಳ್ಳಬೇಕಾಯಿತು ಬಾಂಗ್ಲಾದೇಶವನ್ನು ನಮ್ಮ ಸೈನಿಕರು ಪ್ರಾಣ ತ್ಯಾಗ ಮಾಡಿ ಯುದ್ಧ ಮಾಡಿ ಗೆದ್ದು ಕೊಟ್ಟಿದ್ದಾರೆ ಅರ್ಥವಾಯಿತಾ ಕಾಂಗ್ರೆಸ್ಗೆ ನಮ್ಮ ಹಿಂದೂಗಳನ್ನು ಸಾಯಿಸುತ್ತಿದ್ದಾರೆ ಕಣ್ಣು ಮುಚ್ಚಿಕೊಂಡು ಕುಳಿತಿದೆ ಕಾಂಗ್ರೆಸ್ ಪಕ್ಷ ಯಾರೂ ಮಾತನಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top