ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ

ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ ಕಾರ್ಯಕ್ರಮ ಜು.8 ಗುರುವಾರ ನಡೆಯಿತು.

ಪುತ್ತೂರು ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ಅಧ್ಯಕ್ಷ ಸತ್ಯಗಣೇಶ್ ದೀಪ ಬೆಳಗಿಸಿ ಉದ್ಘಾಟಿಸಿ ಕಂಪ್ಯೂಟರ್ ಶಿಕ್ಷಣದ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಉದ್ಯಮಿ, ದಾನಿ ಧರ್ಮಪಾಲ ಪಾಲ್ಗೊಂಡಿದ್ದರು. ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಿದ್ದರು.  ಸಂಸ್ಥೆಯ ಸಂಚಾಲಕ ಎ.ವಿ. ನಾರಾಯಣ, ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ, ಉಪಾಧ್ಯಕ್ಷ ಉಮೇಶ್ ಮಳುವೇಲು, ನಿರ್ದೇಶಕ ಪ್ರತಿಭಾದೇವಿ ಸಂದರ್ಭೋಚಿತವಾಗಿ ಮಾತನಾಡಿದರು.





















































 
 

ಪುತ್ತೂರು ತುಳು ಕೂಟದ ಅಧ್ಯಕ್ಷ ಪ್ಯಾಟ್ರಿಕ್ ಸಿಪ್ರಿಯಾನ್ ಮಸ್ಕರೇನಸ್, ಬೋಧಕ ಬೋಧಕೇತರ ವೃಂದ  ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿಯರಾದ ಆನ್ವಿ, ಶಿವಾನಿ, ಅದ್ವಿತಿ, ಜ್ಯೋಸ್ತ್ನ, ಚಾರ್ವಿ  ಪ್ರಾರ್ಥಿಸಿದರು. ಸಂಸ್ಥೆಯ  ಪ್ರಾಂಶುಪಾಲೆ ಸವಿತಾ ಕುಮಾರಿ ಕೆ. ಸ್ವಾಗತಿಸಿದರು. ಶಿಕ್ಷಕಿಯರಾದ ರಂಜಿತಾ ರೈ ವಂದಿಸಿದರು. ವನಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top