ಆ.10 : ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿಯ “ಸುವರ್ಣ ಸಂಭ್ರಮ” ದ ಪ್ರಯುಕ್ತ ‘ಆಟಿ ಕೂಟ’

ಕಾಣಿಯೂರು: ಕಡಬ ತಾಲೂಕಿನ ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ, ಸುವರ್ಣ ಮಹೋತ್ಸವ ಸಮಿತಿ -2024 ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ “ಸುವರ್ಣ ಸಂಭ್ರಮ” ದ ಪ್ರಯುಕ್ತ ‘ಆಟಿ ಕೂಟ’ ಕಾರ್ಯಕ್ರಮ ಆ10 ರಂದು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನ ಮಂದಿರದಲ್ಲಿ ನಡೆಯಲಿದೆ.

ಬೆಳಿಗ್ಗೆ 9-30 ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಲಕ್ಷ್ಮೀನರಸಿಂಹ ಭಜಾನ ಮಂಡಳಿ ಸ್ಥಾಪಕ ಸದಸ್ಯ ದೇವಣ್ಣ ಗೌಡ ಮಿತ್ತಟ್ಟ ನೆರವೇರಿಸಲಿದ್ದು, ಶ್ರೀ ಲಕ್ಷ್ಮೀನರಸಿಂಹ ಭಜಾನ ಮಂಡಳಿ ಮಾಜಿ ಅಧ್ಯಕ್ಷ ಪರಮೇಶ್ವರ ಗೌಡ ಅನಿಲ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಕ ಗಣೇಶ್ ನಡುವಾಲು ಪಾಲ್ಗೊಳ್ಳಲಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಅಧ್ಯಕ್ಷರು, ಸರ್ವ ಸದಸ್ಯರು ತಿಳಿಸಿದ್ದಾರೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top