ಸವಣೂರು: ಕಡಬ ತಾಲೂಕಿನ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿಯನ್ನು ಇಂದು ಆಚರಿಸಲಾಯಿತು.

ನಾಗರಪಂಚಮಿ ಅಂಗವಾಗಿ ಬೆಳಿಗ್ಗೆ 10 ಗಂಟೆಯಿಂದ ನಾಗತಂಬಿಲ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿಗಳು, ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.