ಸವಣೂರು: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿಯನ್ನು ಆಚರಿಸಲಾಯಿತು.

ನೂರಾರು ಭಕ್ತಾದಿಗಳು ಮುಂಜಾನೆಯಿಂದಲೇ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಹಾಲು, ಸೀಯಾಳಾ, ಹಣ್ಣುಕಾಯಿ ಅರ್ಪಿಸಿ ಪುನೀತರಾದರು. ದೇವಸ್ಥಾನದ ಅರ್ಚಕರು ಶ್ರೀ ನಾಗನಿಗೆ ಅಭಿಷೇಕ ಮಾಡಿದರು.

ಈ ಸಂದರ್ಭದಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯ ಸಂಚಾಲಕ ಸವಣೂರು ಸೀತಾರಾಮ ರೈ, ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ, ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಉತ್ಸವ ಸಮಿತಿಯ ಪದಾಧಿಕಾರಿಗಳು, ಭಕ್ತಾದಿಗಳು ಪಾಲ್ಗೊಂಡಿದ್ದರು.