ವಯನಾಡ್: ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡಿ ದುರಂತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡರು.
ಕಣ್ಣೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಹೆಲಿಕಾಪ್ಟರ್ ಮೂಲಕ ವಯನಾಡ್ ತಲುಪಿದರು. ನಂತರ ಭೂಕುಸಿತ ಸಂಭವಿಸಿದ ಮುಂಡಕ್ಕೆ- ಚೂರಲ್ಮಲ-ಪುಂಚಿರಿಮಟ್ಕಂ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಯಿತು.
ಪ್ರಧಾನಮಂತ್ರಿಯವರೊಂದಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇಂದ್ರ ಸಚಿವ ಸುರೇಶ್ ಗೋಪಿ ಮತ್ತಿತರರು ಉಪಸ್ಥಿತರಿದ್ದರು. ಶಿಬಿರದಲ್ಲಿರುವವರನ್ನು ಮೋದಿ ಖುದ್ದಾಗಿ ಭೇಟಿ ಮಾಡಿ ಮಾತನಾಡಲಿದ್ದಾರೆ.

























