ಪುತ್ತೂರು: ಬೆಂಗಳೂರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿಯೊಂದನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಇಂದು ನೀಡಲಾಯಿತು.
ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಬೆಂಗಳೂರು ಚಲೋ ಹೋರಾಟದ ಪೂರ್ವಭಾವಿಯಾಗಿ ಈ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಘಟಕ ದ ಅಧ್ಯಕ್ಷ ನಾಗೇಶ್ ಪಾಟಾಳಿ ಪೆರುವಾಯಿ, ಪುತ್ತೂರು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ತನುಜಾ, ಅಶ್ರಫ್, ಜಿಲ್ಲಾ ಸಂಘದ ನಾಮನಿರ್ದೇಶಿತ ಉಪಾಧ್ಯಕ್ಷ ರಾಮಣ್ಣ ರೈ, ಶಿಕ್ಷಕರ ಪ್ರತಿನಿಧಿಗಳಾದ ಸ್ಟ್ಯಾನಿ ಪ್ರವೀಣ್ ಮಸ್ಕರೇನ್ಹಸ್, ಶಾಂತಿ ಮೊರಾಸ್ ಹಾಗೂ ತಾಲೂಕಿನ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.