ಪುತ್ತೂರು: ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಿಶ್ವಸ್ಥ ಮಂಡಳಿ ನೂತನ ಅಧ್ಯಕ್ಷರಾಗಿ ಉಮೇಶ್ ಕೊಡಿಬೈಲು ಪುನರಾಯ್ಕೆಯಾಗಿದ್ದಾರೆ.
ಶ್ರೀ ದೇವಸ್ಥಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಉಮೇಶ್ ಕೋಡಿಬೈಲು ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಉಮೇಶ್ ಅವರು ಪುತ್ತಿಲ ಪರಿವಾರ ಸಂಘಟನೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ.
























