ಪುತ್ತೂರು: ಯಾವುದೇ ಓರ್ವ ವ್ಯಕ್ತಿ ಯಶಸ್ಸನ್ನು ಸಾಧಿಸಬೇಕೆಂದರೆ ಅವನ ಮುಂದೆ ಗುರಿ ಇರಬೇಕು, ಹಿಂದೆ ಗುರುವಿರಬೇಕು ಎನ್ನುವ ನಂಬಿಕೆಯಿದೆ. ಗುರುವಿಲ್ಲದೆ ಜೀವನಕ್ಕೆ ಅಥವಾ ಜ್ಞಾನಕ್ಕೆ ಯಾವುದೇ ರೀತಿಯ ಅರ್ಥವಿರುವುದಿಲ್ಲ. ನಮ್ಮ ಮೊದಲ ಗುರು ತಾಯಿ ನಮಗೆ ಜೀವನದ ಅರ್ಥವನ್ನು ನೀಡುತ್ತಾಳೆ ಅದೇ ರೀತಿ ಜೀವನಕ್ಕೆ ಅಗತ್ಯವಾದ ಜ್ಞಾನವನ್ನು ಗುರು ನೀಡುತ್ತಾನೆ. ಎಂದು ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ ಸಂಸ್ಥೆಯ ಪ್ರಿನ್ಸಿಪಾಲ್ ಶೋಭಿತ ಸತೀಶ್ ಹೇಳಿದರು.
ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗುರು ಪೂರ್ಣಿಮೆಯ ಆಚರಣೆಯ ಕಾರ್‍ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದಿನ ದಿನಮಾನಗಳಲ್ಲಿ ಆರೋಗ್ಯಕರ ಬದುಕನ್ನು ನಡೆಸಲು ಉತ್ತಮ ಜೀವನ ಶೈಲಿಯೊಂದಿಗೆ ಸ್ವಚ್ಚ ಹಾಗೂ ಉತ್ತಮ ಪರಿಸರ ಅತಿ ಅಗತ್ಯವಾಗಿದ್ದು, ಅದಕ್ಕಾಗಿ ಮರ ಗಿಡಗಳನ್ನು ಹೆಚ್ಚು ಹೆಚ್ಚಾಗಿ ಬೆಳೆಸುವ ಮೂಲಕ ಪ್ರಕೃತಿಗೆ ನಮ್ಮ ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.
ಈ ಸಂದರ್ಭದಲ್ಲಿ ಉಪನ್ಯಾಸಕರು ಕಾಲೇಜಿನ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್‍ಯಕ್ರಮಕ್ಕೆ ಚಾಲನೆ ನೀಡಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಪ್ರಸಾದ್ ಶ್ಯಾನಭಾಗ್, ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯಾರ್ಥಿ ಶ್ರಜನ್ ಸ್ವಾಗತಿಸಿ, ಶ್ರೇಯಾ ವಂದಿಸಿದರು. ಆಶಿಕಾ ರಾವ್ ಕಾರ್‍ಯಕ್ರಮ ನಿರೂಪಿಸಿದರು.