ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸನ್ಮಾನ

ಕೆದಿಲ : ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಭಟ್ ಬಿ. ಪೆರ್ನಾಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವ ಗೌಡ ಕಾಂತುಕೋಡಿ ಅವರನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರಿ ರತ್ನ ಎಂ.ಎನ್. ರಾಜೇಂದ್ರ ಕುಮಾರ್ ಮಂಗಳೂರಿನಲ್ಲಿ ನಡೆದ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನಿಸಿದರು.

2023-24ರ ಆರ್ಥಿಕ ವರ್ಷದಲ್ಲಿ ಕೆದಿಲ ವ್ಯ. ಸೇ. ಸ. ಸಂಘದ ಸದಸ್ಯರು 100% ಸಾಲ ಮರುಪಾವತಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಸದಸ್ಯರು ಹಿಂದಿನ ಸತತ 10 ವರ್ಷಗಳಿಂದ 100% ಸಾಲ ಮರುಪಾವತಿ ಮಾಡಿ ಪ್ರತಿ ವರ್ಷ ಪ್ರಶಸ್ತಿ ಪಡೆಯಲು ಕಾರಣರಾಗಿದ್ದಾರೆ. ಸಂಘವು ಆಡಿಟ್ ವರ್ಗೀಕರಣದಲ್ಲಿ 19 ವರ್ಷಗಳಿಂದ ಸತತವಾಗಿ “ಎ” ಶ್ರೇಣಿಯಲ್ಲಿದೆ.

ಈ ಸಂದರ್ಭದಲ್ಲಿ ಬ್ಯಾಂಕ್ ನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ಬಂಟ್ವಾಳ ತಾಲೂಕಿನ ನಿರ್ದೇಶಕ ಟಿ.ಜಿ. ರಾಜಾರಾಮ ಭಟ್, ನಿರ್ದೇಶಕರುಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top