ಪುತ್ತೂರು: ನಗರದ ಧರ್ಮಸ್ಥಳ ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ರ್ 18ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ 18ನೇ ವರ್ಷದ “ಅಷ್ಟಾದಶ ಸಂಗಮ” ಸ್ಥಾಪಕ ದಿನಾಚರಣೆಯನ್ನು ಆ.18 ಭಾನುವಾರ ಹಮ್ಮಿಕೊಂಡಿದೆ.
ಪ್ರಗತಿ ಸ್ಟಡಿ ಸೆಂಟರ್ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಮೊಗದಲ್ಲಿ ಹೊಸ ಮಂದಹಾಸ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಾಂತ ಹೆಸರು ವಾಸಿಯಾಗಿದೆ. ಇಲ್ಲಿ ಹತ್ತನೇ ತರಗತಿ, ದ್ವಿತೀಯ ಪಿಯುಸಿಯ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗ, ಕಂಪ್ಯೂಟರ್ ತರಗತಿ, ಸಿಇಟಿ, ನೀಟ್, ತರಗತಿ, ಜವಾಹರ್ ನವೋದಯ ತರಬೇತಿ, ಎನ್ ಎಂಎಂಎಸ್, ಎನ್ ಟಿಎಸ್ ಇ, 1 ರಿಂದ ಪದವಿಯವರಿಗೆ ಟ್ಯೂಷನ್ ತರಗತಿ ಹೀಗೆ ಹಲವಾರು ತರಗತಿಗಳನ್ನು ನೀಡುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ವಿಭಿನ್ನ ಪ್ರಯೋಗಗಳನ್ನು ಮಾಡುತ್ತಾ ಪುಟ್ಟ ಪುಟ್ಟ ಹೆಜ್ಜೆಯ ಮೂಲಕ 18ನೇ ವರ್ಷಕ್ಕೆ ಕಾಲಿಟ್ಟಿದೆ.
ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಗತಿ ಎಜ್ಯುಕೇಶನ್ ಫೌಂಡೇಶನ್ ಸ್ಥಾಪಕಾಧ್ಯಕ್ಷ ಗೋಕುಲ್‌ನಾಥ್ ಪಿ.ವಿ. ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ, ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಚಿತ್ರಕಲಾ ಶಿಕ್ಷಕ ಪರಶುರಾಮ ಲದ್ವಾ, ಕೊಂಬೆಟ್ಟು ಶಾಲಾ ಹಿರಿಯ ವಿದ್ಯಾರ್ಥಿನಿ ಅಕ್ಷಿತಾ ಎಂ. ಕೆ. ಕೊಡಗು Siemens Technology As Senior Operation ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಗುವುದು. ಬಳಿಕ ವಿಠಲ್ ನಾಯಕ್ ಕಲ್ಲಡ್ಕ ಅವರಿಂದ ಗೀತ ಸಾಹಿತ್ಯ ವೈವಿಧ್ಯ ಎಂಬ ವಿನೂತನ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಪ್ರಾಂಶುಪಾಲೆ ಹೇಮಲತಾ ಗೋಕುಲ್‌ನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.