ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 13ನೇ ಬಾರಿಗೆ ಕೇಂದ್ರ ಸಹಕಾರಿ ಬ್ಯಾಂಕ್‍ ನಿಂದ ಪ್ರಶಸ್ತಿ

ಸವಣೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿಸಂಘದ ಸಾಧನೆಗೆ ಸತತ 13ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇಂದು ಮಂಗಳೂರಿನಲ್ಲಿ ನಡೆದ ಕೇಂದ್ರ ಸಹಕಾರಿ ಬ್ಯಾಂಕ್‍ ನ ಮಹಾಸಭೆಯಲ್ಲಿ ಸಂಘ ಅಧ್ಯಕ್ಷ ತಾರನಾಥ ಕಾಯರ್ಗ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ. ಅವರಿಗೆ  ಕೇಂದ್ರ ಸಹಕಾರಿ ಬ್ಯಾಂಕ್‍ ಅಧ್ಯಕ್ಷ, ಸಹಕಾರಿ ರತ್ನ  ಎಂ.ಎನ್‍ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್‍ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಜಯರಾಮ ರೈ ಬಳೆಜ್ಜ, ಪ್ರಸಾದ್ ಕೌಶಲ್ ಶೆಟ್ಟಿ, ಸವಣೂರು ಸಿಎ ಬ್ಯಾಂಕ್‍ ನಿರ್ದೇಶಕರಾದ ಉದಯ ರೈ ಮಾದೋಡಿ, ಪ್ರಕಾಶ್ ರೈ ಸಾರಕರೆ, ಶಿವಪ್ರಸಾದ್ ಎಂ.ಎಸ್‍. ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top