ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲ ವತಿಯಿಂದ 78 ನೇ ಸ್ವಾತಂತ್ರ್ಯ ಉತ್ಸವದ ಅಂಗವಾಗಿ ಪ್ರಧಾನ ಮಂತ್ರಿ ಆವಾಜ್ ಯೋಜನೆಯ ವಿವಿಧ ಫಲಾನುಭವಿಗಳ ಮನೆಗೆ ತೆರಳಿ ರಾಷ್ಟ್ರಧ್ವಜವನ್ನು ಹಾಗೂ ನರೇಂದ್ರ ಮೋದೀಜಿಯವರ ಭಾವಚಿತ್ರವನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ ಸಂಜೀವ ಮಠಂದೂರು, ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಿಯೋಜಿತ ಅಧ್ಯಕ್ಷ ಶಿವಕುಮಾರ್ ಪಿ.ಬಿ.,ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ನಿಯೋಜಿತ ಪ್ರಧಾನ ಕಾರ್ಯದರ್ಶಿ ನಾಗೇಶ್ ಪ್ರಭು ಭಾಗವಹಿಸಿದ್ದರು.
ನಗರಸಭಾ ಸದಸ್ಯರಾದ ಸಂತೋಷ್ ಕುಮಾರ್, ಮೋಹಿನೀ ವಿಶ್ವನಾಥ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್,ಬೂತ್ ಅಧ್ಯಕ್ಷ ದಯಾಕರ್, ನಾರಾಯಣ ನಾಯ್ಕ್, ಕಾರ್ಯಕರ್ತರಾದ ಶ್ರೀಮತಿ ಪುಷ್ಪಾ, ಸುನೀತಾ, ಸರೋಜಿನಿ ಮೊದಲಾದವರು ಉಪಸ್ಥಿತರಿದ್ದರು.