ಕೊಡಗು : ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಮೂಲತಃ ಕೇರಳ ರಾಜ್ಯದ ಇಡುಕ್ಕಿಯವನಾದ ಸುರೇಶ್ ಬಂಧಿತ ಆರೋಪಿ.
ಮಡಿಕೇರಿ ತಾಲ್ಲೂಕಿನ ಸಣ್ಣಪುಲಿಕೋಟು ಗ್ರಾಮದಲ್ಲಿ ಮನೆಯೊಂದನ್ನು ಬಾಡಿಗೆ ಪಡೆದಿದ್ದ ಸುರೇಶ್ ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ. ಇವನಿಂದ ಬಂದೂಕುಗಳನ್ನು ಖರೀದಿಸಿದ್ದ ಮೂವರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.
ಅಕ್ರಮವಾಗಿ ಬಂದೂಕು ಖರೀದಿಸಿದ್ದ ಕರಿಕೆ ನಿವಾಸಿ ಎನ್.ಜೆ ಶಿವರಾಮ(45), ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಎಸ್.ರವಿ(35), ಮಡಿಕೇರಿ ತಾಲ್ಲೂಕಿನ ದೊಡ್ಡಪುಲಿಕೋಟು ಗ್ರಾಮದ ಕೋಟಿ(55) ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳು, 5 ನಾಡ ಬಂದೂಕು, 1 ಪಿಸ್ತೂಲನ್ನು ವಶಕ್ಕೆ ಪಡೆದಿದ್ದಾರೆ. ಕೊಡಗು ಎಸ್ಪಿ ರಾಮರಾಜನ್ ಮಾರ್ಗದರ್ಶನದಲ್ಲಿ ಕಾರ್ಯಚರಣೆ ನಡೆಸಿ, ಆರೋಪಿಗಳನ್ನ ಬಂಧಿಸಿ ಜೈಲಿಗೆ ಹಾಕಲಾಗಿದೆ.