ಸಕಲೇಶಪುರ ಮತ್ತೆ ರೈಲ್ವೇ ಹಳಿಗೆ ಭೂಕುಸಿತ | ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್

ಹಾಸನ: ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಇಂದು ಮತ್ತೆ ಭೂಕುಸಿತ ಉಂಟಾದ ಪರಿಣಾಮ ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ.

ಕಳೆದ ಒಂದು ವಾರದ ಹಿಂದೆ ಇದೆ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿದ್ದು, ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಮತ್ತೆ ಮಣ್ಣು ಕುಸಿತಗೊಂಡಿದೆ.

ಭೂ ಕುಸಿತದಿಂದಾಗಿ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್ ರೈಲು ಮಾರ್ಗಮಧ್ಯೆ ನಿಂತಿದೆ. ರೈಲು ನಿಲುಗಡೆಯಿಂದ ಪ್ರಯಾಣಿಕರು ಪರದಾಟ ಪಡುವಂತಾಗಿದೆ.































 
 

ವರಮಹಾಲಕ್ಷ್ಮೀ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ರೈಲು ನಿಲುಗಡೆಯಿಂದ ಪರದಾಡುವಂತಾಗಿದ್ದು ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top