ಪುತ್ತೂರು: ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸಕೇಂದ್ರ ಪುತ್ತೂರು ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ ಆ.16ರಂದು ನಡೆದ 17ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ವೇ ಮೂ ಹರಿಪ್ರಸಾದ ವೈಲಾಯ ಅವರ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ನವೀನ್ ಭಂಡಾರಿ ಎಚ್ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಧಾರ್ಮಿಕ ವಿಚಾರದಲ್ಲಿ ದೇವಸ್ಥಾನ ಪೂರ್ಣ ಸಹಕಾರ ನೀಡುತ್ತದೆ. ಈ ನಿಟ್ಟಿನಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ನೇತೃತ್ವದಲ್ಲಿ ಕಳೆದ 17 ವರ್ಷ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ವರಮಹಾಲಕ್ಷ್ಮೀಯಲ್ಲಿ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿರುವುದು ಭಕ್ತಿಯ ಪ್ರಧಾನವಾಗಿದೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣ ವಿನಯಚಂದ್ರ ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಯಾಗಿ ಡ್ಯಾಶ್ ಮಾರ್ಕೆಟಿಂಗ್ ಸಂಸ್ಥೆಯ ನಿರ್ದೇಶಕಿ ನಳಿನಿ ಪಿ ಶೆಟ್ಟಿ ಉಪಸ್ಥಿತರಿದ್ದರು. ಮಾಜಿ ಶಾಸಕಿ ಸಮರ್ಪಣಾ ಮಹಿಳಾ ಸೇವಾ ಸಂಸ್ಥೆಯ ಗೌರವಾಧ್ಯಕ್ಷೆ ಶಕುಂತಳಾ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಜಯಶ್ರೀ ಈಶ್ವರ ಭಟ್ ಪಂಜಿಗುಡ್ಡೆ, ಅನ್ನಪೂರ್ಣಿಮ ಆರ್ ರೈ ಕುತ್ಯಾಡಿ ಪಾಲ್ಗೊಂಡಿದ್ದರು.
ಸಮಿತಿ ಕಾರ್ಯದರ್ಶಿ ಸುಜಯಾ, ಸದಸ್ಯೆ ಶಾರದಾ ಅರಸ್, ಒಡಿಯೂರು ವಜ್ರಮಾತಾ ಮಹಿಳಾ ವಿಕಾಸ ಸೇವಾ ಕೇಂದ್ರ ಪುತ್ತೂರು ಘಟಕದ ಅಧ್ಯಕ್ಷೆ ನಯನಾ ರೈ, ಸ್ವರ್ಣಲತಾ ಹೆಗ್ಡೆ ಅತಿಥಿಗಳನ್ನು ಪರಿಚಯಿಸಿದರು. ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ಶುಭಮಾಲಿನಿ ಮಲ್ಲಿ ಸ್ವಾಗತಿಸಿದರು. ಸಮರ್ಪಣಾ ಮಹಿಳಾ ಸೇವಾ ಸಂಸ್ಥೆಯ ಅಧ್ಯಕ್ಷೆ ಗಂಗಾರತ್ನ ವಿ ರೈ ವಂದಿಸಿದರು. ನ್ಯಾಯವಾದಿ ಹರಿಣಾಕ್ಷಿ ಜಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಪೂಜೆ ಮಾಡಿಸಿದ ಭಕ್ತರಿಗೆ ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಡೆಯಿತು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು..