ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪುತ್ತೂರು: ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳ ನೇತೃತ್ವದಲ್ಲಿ ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಪ್ರತಿಭಟನೆ ಹಾಗೂ ಹಿಂದೂ ವಿರೋಧಿ ಶಕ್ತಿಗಳ ಪ್ರತಿಕೃತಿ ದಹನ ನಡೆಯಿತು.

ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ಈ ಪ್ರತಿಭಟನಾ ಕಾರ್ಯಕ್ರಮಕ್ಕೆ ಸಾಥ್ ನೀಡಿದರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಉಪನ್ಯಾಸಕ ಆದರ್ಶ ಗೋಖಲೆ, ಇಂದು ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದೂ ದೌರ್ಜನ್ಯ ನಾಳೆ ಭಾರತದಲ್ಲೂ ನಡೆದರೆ ಅಚ್ಚರಿಯಿಲ್ಲ. ಇದನ್ನು ತಡೆಯಬೇಕಾದರೆ ಹಿಂದೂಗಳೆಲ್ಲರೂ ಒಂದಾಗಿ ಜಾಗೃತಿ ಮೂಡಿಸಿಕೊಳ್ಳಬೇಕು. ಮತೀಯವಾದಿಗಳ ವಿರುದ್ಧ ನಿರ್ದಾಕ್ಷಿಣ್ಯ ಹೋರಾಟ ನಡೆಸಬೇಕು ಎಂದರು.





























 
 

ವಿದ್ಯಾರ್ಥಿನಿ ಅಕ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.

ವೇದಿಕೆಯಲ್ಲಿ ವಿದ್ಯಾರ್ಥಿ ಸಂಘದ ನಿಯೋಜಿತ ಕಾರ್ಯದರ್ಶಿ ಪ್ರಿಯಾಲ್ ಆಳ್ವಾ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಹಸ್ರಾರು ವಿದ್ಯಾರ್ಥಿಗಳೆಲ್ಲರೂ ಜತೆಗೂಡಿ ಹಿಂದೂ ವಿರೋಧಿ ಶಕ್ತಿಗಳ ಪ್ರತಿಕೃತಿಗೆ ಬೆಂಕಿಯಿಟ್ಟು ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top