ಪುತ್ತೂರು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಸ್ಕೂಟರ್ ಸವಾರ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಉಪ್ಪಿನಂಗಡಿ ಎಸ್.ಬಿ.ಐ ಬ್ಯಾಂಕ್ ಬಳಿ ನಡೆದಿದೆ.
ಈ ಬಗ್ಗೆ ಮಹಿಳೆ ನೀಡಿದ ದೂರಿನ ಮೇರೆಗೆ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಿಚಿತ ಸ್ಕೂಟರ್ ಸವಾರ ಉಪ್ಪಿನಂಗಡಿಯ ಎಸ್.ಬಿ.ಐ ಬ್ಯಾಂಕ್ ಬಳಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿ, ಡಾಮಾರು ರಸ್ತೆ ಬದಿಯ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಪಡಿಸಿದ್ದು, ಅಪಘಾತದ ಪರಿಣಾಮ ಮಹಿಳೆ ರಸ್ತೆಗೆ ಬಿದ್ದು ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಅಪಘಾತದ ಬಳಿಕ ಸವಾರ ಗಾಯಾಳುವನ್ನು ಚಿಕಿತ್ಸೆ ಬಗ್ಗೆ ಆಸ್ಪತ್ರೆಗೆ ದಾಖಲಿಸದೇ, ಪೊಲೀಸ್ ಠಾಣೆಗೆ ಮಾಹಿತಿ ನೀಡದೇ ಪರಾರಿಯಾಗಿರುತ್ತಾನೆ ಎಂದು ದೂರಿನಲ್ಲಿ ತಿಳಿಸಿರುತ್ತಾರೆ.
ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.