ಪುತ್ತೂರು: ಕೋಲ್ಕತ್ತಾದ ಆರ್ ಜಿ ಆರ್ ವೈದ್ಯಕೀಯ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಹತ್ಯೆ ಘಟನೆಯನ್ನು ಖಂಡಿಸಿ ಪುತ್ತೂರಿನಲ್ಲೂ ಸರಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಯನ್ನು ಹೊರತುಪಡಿಸಿ ಹೊರಗೋಗಿ, ಒಳರೋಗಿ ವಿಭಾಗವನ್ನು ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಪುತ್ತೂರು ತಾಲೂಕಿನಲ್ಲಿ ಇರುವ ಆಧುನಿಕ ವೈದ್ಯ ಪದ್ದತಿಯ ಸೇವೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳು ಮತ್ತು ಕ್ಲಿನಿಕ್ ಗಳಲ್ಲಿ ಎಲ್ಲಾ ತುರ್ತು ಹಾಗೂ ಗಂಭೀರವಲ್ಲದ ಸಾಮಾನ್ಯ ವೈದ್ಯಕೀಯ ಸೇವೆಗಳು ಲಭ್ಯವಿರಲಿಲ್ಲ. ತುರ್ತು ವೈದ್ಯಕೀಯ ಸೇವೆಗಳನ್ನು ಮಾತ್ರ ನೀಡಲಾಗುತ್ತಿದೆ.
ಅಮಾನುಷವಾಗಿ ಅತ್ಯಾಚಾರಗೊಂಡು ಹತ್ಯೆಯಾದ ಕರ್ತವ್ಯ ನಿರತ ಮಹಿಳಾ ವೈದ್ಯೆಯ ಆತ್ಮಕ್ಕೆ ನ್ಯಾಯ ದೊರಕಿಸಿ ಕೊಡಲು ಸಹಕರಿಸಬೇಕು ಎಂದು ಪುತ್ತೂರು ಐಎಂಎ ತಿಳಿಸಿದೆ.