ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್‌ ರೈಲು | ತಪ್ಪಿದ ಅನಾಹುತ

ಉತ್ತರ ಪ್ರದೇಶ  : ಸಬರಮತಿ ಎಕ್ಸ್‌ಪ್ರೆಸ್‌ ರೈಲಿನ 22 ಬೋಗಿಗಳು ಹಳಿ ತಪ್ಪಿದೆ. ಅದೃಷ್ಟವಶಾತ್ ಯವುದೇ ಪ್ರಾಣಹಾನಿ ಸಂಭವಿಸಿಲ್ಲ.

ಕಾನ್ಸುರ್‌ ಮತ್ತು ಭೀಮಸೇನ್ ನಡುವೆ ಸಬರಮತಿ ಎಕ್ಸೆಸ್ ರೈಲಿನ 22 ಬೋಗಿಗಳು ಹಳಿ ತಪ್ಪಿದೆ. ಅದೇ ಹಳಿ ಮೇಲೆ ಮೆಮೊ ರೈಲೊಂದು ಬರುತ್ತಿತ್ತು. ಅದೃಷ್ಟವಷಾತ್ ಯಾವುದೇ ಸಾವುನೋವು ಸಂಭವಿಸಿಲ್ಲ. ಪ್ರಯಾಣಿಕರನ್ನು ಬಸ್ಸಿನ ಮೂಲಕ ಕಾನ್ಸುರ್‌ ರೈಲ್ವೆ ಸ್ಟೇಷನ್ ತಲುಪಿಸಿದ್ದೇವೆ ಎಂದು ಜಿಲ್ಲಾ ಮಾಜಿಸ್ಟ್ರೇಟ್ ರಾಕೇಶ್ ವರ್ಮಾ ತಿಳಿಸಿದ್ದಾರೆ.

ಸಬರಮತಿ ಎಕ್ಸ್‌ಪ್ರೆಸ್‌) ರೈಲು ಕಾನ್ಸುರ್‌ ಹತ್ತಿರ ನಸುಕಿನ 2:35 ಗಂಟೆಗೆ ಹಳಿ ತಪ್ಪಿದೆ. ಎಂಜಿನ್ ಹೀಟ್ ಆಗಿರುವುದು ಗಮನಕ್ಕೆ ಬಂದಿದೆ. ಅದರ ಮಾಹಿತಿ ಕಲೆ ಹಾಕುತ್ತಿದ್ದೇವೆ. ಐಬಿ ಮತ್ತು ಯುಪಿ ಪೊಲೀಸರು ಪರೀಶಿಲನೆ ಮಾಡುತ್ತಿದ್ದಾರೆ. ಯಾವುದೇ ಪ್ರಯಾಣಿಕರಿಗೆ ಮತ್ತು ಸಿಬ್ಬಂದಿಗೆ ಸಮಸ್ಯೆಯಾಗಿಲ್ಲ. ಪ್ರಯಾಣಿಕರಿಗೆ ಮತ್ತೊಂದು ರೈಲಿನ ವ್ಯವಸ್ಥೆ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top