ಮಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ.
ಶಾಹುಲ್ ಹಮೀದ್, ಅನ್ವರ್ ಹಾಗೂ ಕಿಶೋರ್ ಶೆಟ್ಟಿ ಬಂಧಿತರು.
ಮುಖ್ಯಮಂತ್ರಿಗಳ ವಿರುದ್ಧ ಕರ್ನಾಟಕ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಸೋಮವಾರ ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರು ನಗರ ಪಾಲಿಕೆ ಮುಂಭಾಗ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಮಂಗಳೂರು ನಗರ ಪಾಲಿಕೆ ಮುಂಭಾಗದ ಟ್ರಾಫಿಕ್ ಸಿಗ್ನಲ್ ನಲ್ಲಿ ಸಾರ್ವಜನಿಕರನ್ನು ಕರೆದುಕೊಂಡು ಹೋಗುವಾಗ 10-15 ಜನ ಕಿಡಿಗೇಡಿಗಳು ಬಸ್ಸುಗಳನ್ನು ತಡೆದು ಕಲ್ಲುಗಳಿಂದ ಬಸ್ಸಿನ ಮುಂಭಾಗದ ಗಾಜನ್ನು ಓಡಿಸುವ ಮೂಲಕ ನಷ್ಟ ಉಂಟಾಗಿದೆ, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನುಳಿದ ಆರೋಪಿಗಳನ್ನು ಪತ್ತೆಹಚ್ಚುವ ಸಲುವಾಗಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.