ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ

ಪುತ್ತೂರು: ರಕ್ಷಾಬಂಧನ ಸಹೋದರ -ಸಹೋದರಿಯರ ಸಂಬಂಧಕ್ಕೆ ಮಾತ್ರ ಸೀಮಿತವಾಗದೆ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ. ಭಾರತೀಯ ಸಂಪ್ರದಾಯಗಳು ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಪ್ರತೀ ಹಬ್ಬದಲ್ಲೂ ಬದುಕಿಗೆ ಬೇಕಾದ ಸಂದೇಶಗಳು ಇರುತ್ತದೆ. ಅವುಗಳನ್ನು ನಾವು ಅರಿತುಕೊಳ್ಳಬೇಕು. ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ  ರಕ್ಷಾಬಂಧನ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗದ ಕಾಲೇಜು ವಿದ್ಯಾರ್ಥಿ ಪ್ರಮುಖ್ ರೋಹಿತ್  ಹೇಳಿದರು.

ನರೇಂದ್ರ ಪದವಿ ಪೂರ್ವಕಾಲೇಜಿನಲ್ಲಿ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಅವರು ರಕ್ಷಾಬಂಧನ ಆಚರಣೆಯ ಮಹತ್ವವನ್ನು ತಿಳಿಸಿದರು.

ರಕ್ಷಾಬಂಧನ ಎಂಬುದರ ತಾತ್ಪರ್ಯವೇನೆಂದರೆ ಪ್ರೀತಿಯ ಭಾವದಿಂದ ತನ್ನರಕ್ಷಣೆಯ ಜವಾಬ್ದಾರಿಯನ್ನು ಪರಸ್ಪರ ಹಂಚಿಕೊಳ್ಳುವುದು ಎಂದು ಹೇಳಬಹುದು. ದೇಶ ಕಾಯುವ ಯೋಧರು, ಮಾಹಿತಿ ನೀಡಿ ರಕ್ಷಿಸುವ ಮಾಧ್ಯಮದವರು, ಸಾಗಿಸುವ ಸಾರಿಗೆಯವರು, ಅನ್ನ ನೀಡುವ ರೈತರು, ಅಕ್ಷರ ಕಲಿಸುವ ಗುರುಗಳು, ಆರಕ್ಷಕರು ಇವರೆಲ್ಲಾ ನಮ್ಮ ರಕ್ಷಕರೇ ಹೌದು. ಹೀಗೇ ಹಲವಾರು ಪ್ರಾಮಾಣಿಕ ಶಕ್ತಿಗಳು ನಮ್ಮ ರಕ್ಷಕರೇ ಆಗಿರುವರು ಎಲ್ಲಾ ಸಮುದಾಯಗಳ ನಡುವೆ ಸೌಹಾರ್ದ ಮತ್ತು ಏಕತೆಯನ್ನು ಉತ್ತೇಜಿಸಲು ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.































 
 

ಬಳಿಕ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಶ್ಲೋಕ ಪಠಿಸಿ ಪರಸ್ಪರ ರಕ್ಷಾಧಾರಣೆಯನ್ನು ಮಾಡಿದರು. ವಿದ್ಯಾರ್ಥಿ ಯಜ್ಞೇಶ್ ಸ್ವಾಗತಿಸಿ, ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top