ಪುತ್ತೂರು : ಕೊಂಬೆಟ್ಟುವಿನಲ್ಲಿರುವ ಸರಕಾರಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳಿಗೆ ಅದೇ ಕಾಲೇಜಿನ ಹಿಂದೂ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಅವಳ ಕೈಯಲ್ಲಿ ಗೀರಿದ ಗುರುತು ಕಂಡು ಬಂದಿದೆ.ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿ ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಎರಡು ಸಮುದಾಯದ ಯುವಕರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ.
ಕೊಂಬೆಟ್ಟು ಕಾಲೇಜಿನಿಂದ ಪುತ್ತೂರು ಮುಖ್ಯ ಅಂಚೆ ಕಚೇರಿ ಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಬರುತ್ತಿರುವ ವೇಳೆ ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಮುಂಭಾಗ ಘಟನೆ ನಡೆದಿದೆ. ಮೂಲಗಳ ಪ್ರಕಾರ ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿ ಹಾಗು ಹಿಂದೂ ಧರ್ಮಕ್ಕೆ ಸೇರಿದ ವಿದ್ಯಾರ್ಥಿಯ ಮಧ್ಯೆ ಯಾವುದೋ ವಿಷಯಕ್ಕೆ ಸಣ್ಣ ಜಗಳವಾಗಿದೆ . ಈ ವೇಳೆ ವಿದ್ಯಾರ್ಥಿಯೂ ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ ಎಂದು ಹೇಳಲಾಗುತ್ತಿದೆ .
ಮುಂದುವರಿದ ಭಾಗವಾಗಿ ವಿದ್ಯಾರ್ಥಿನಿ ಸರಕಾರಿ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದು, ಆಕೆಯ ಕೈಯಲ್ಲಿ ಗೀರಿದ ಗುರುತು ಕಂಡು ಬಂದಿದೆ. ವಿದ್ಯಾರ್ಥಿನಿ ತನಗೆ ಆದೇ ವಿದ್ಯಾರ್ಥಿ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿರುವುದಾಗಿ ತಿಳಿದು ಬಂದಿದೆ. ಸದ್ಯ ಪೊಲೀಸರು ಘಟನೆ ನಡೆದ ಸ್ಥಳದ ಸಿಸಿಟಿವಿ ವಿಡಿಯೋ ಪರಿಶೀಲಿಸುತ್ತಿದ್ದು, ಆಕೆಯ ಜತೆಗಿದ್ದ ಬೇರೆ ವಿದ್ಯಾರ್ಥಿಗಳ ಬಳಿಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ.